ಕಳೆದ ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು(ಎ.10) ಪ್ರಕಟಗೊಳುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ (Karnataka PUC Results) ಇಂದು 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು, ಬಳಿಕ ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಪಿಯುಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶಗಳು ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಮೊಬೈಲ್ ಮೂಲಕ ಇಲ್ಲವೇ ಇಂಟರ್‌ನೆಟ್ ಸೆಂಟರ್‌ಗಳು ಅಥವಾ ಮನೆಯಲ್ಲಿಯೇ ಕುಳಿತು ನೆಟ್‌ನಲ್ಲಿ ರಿಸಲ್ಟ್ ವೀಕ್ಷಿಸಲು ಅವಕಾಶವಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಪಿಯುಸಿ ಫಲಿತಾಂಶವನ್ನು ಈ ಕೆಳಗೆ ನೀಡಿರುವಂತೆ ನೋಡಬಹುದು.
ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.
2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು