main logo

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಪುತ್ತೂರು: ಹವಾನಿಯಂತ್ರಕ ಯಂತ್ರದಲ್ಲಿ ಶುಕ್ರವಾರ ರಾತ್ರಿ ದೋಷ ಕಾಣಿಸಿಕೊಂಡ ಕಾರಣ ಪುತ್ತೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ತೀವ್ರ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಹವಾನಿಯಂತ್ರಕ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿದೆ. ತೀವ್ರ ನಿಗಾ ಘಟಕದಲ್ಲಿದ್ದ ಇಬ್ಬರು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಅಶೋಕ್‌ ರೈ ಭೇಟಿ ನೀಡಿದ್ದಾರೆ. ಪುತ್ತೂರಿನ ವಿಹಿಂಪ ಕಚೇರಿಯಲ್ಲಿದ್ದ ದತ್ತ ಮಾಲಾಧಾರಿಗಳು ಹಾಗೂ ಅಶೋಕ್‌ ರೈ ಅಭಿಮಾನಿ ಬಳಗದವರು ಅಗ್ನಿಶಮನಕ್ಕೆ ನೆರವಾಗಿದ್ದಾರೆ ಎಂದು ತಿಳಿದುಬಂದಿದೆ.

 

Related Articles

Leave a Reply

Your email address will not be published. Required fields are marked *

error: Content is protected !!