main logo

ಮೋದಿ ಉಪನಾಮ: ರಾಹುಲ್‌ ಗೆ ಸೂರತ್‌ ನ್ಯಾಯಾಲಯದ ಶಿಕ್ಷೆ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಮೋದಿ ಉಪನಾಮ: ರಾಹುಲ್‌ ಗೆ ಸೂರತ್‌ ನ್ಯಾಯಾಲಯದ ಶಿಕ್ಷೆ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್‌ ನ್ಯಾಯಾಲಯ ನೀಡಿದ ಎರಡು ವರ್ಷಗಳ ಶಿಕ್ಷೆ ಆದೇಶವನ್ನು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಇಂದು ಎತ್ತಿ ಹಿಡಿದಿದೆ.
ಈ ಹಿಂದೆ ಮಾರ್ಚ್​ 23ರಂದು ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿ ವಜಾಗೊಳಿಸಿದೆ. ಇದು ರಾಹುಲ್‌ ಗಾಂಧಿ ಅವರಿಗೆ ಭಾರಿ ಹಿನ್ನಡೆಯಾಗಿದೆ.ಈ ತೀರ್ಪನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಸುಪ್ರಿಂ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆಯಿದೆ.

ಈ ಹಿಂದೆ ಶಿಕ್ಷೆ ಪ್ರಕಟವಾದ ಬಳಿಕ ರಾಹುಲ್‌ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಆದರೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!