ಉಡುಪಿ: ಮುಂದಿನ ದಿನಗಳಲ್ಲಿ ಮಳೆ ತೀವ್ರತೆ ಪಡೆಯುವ ಮುನ್ಸೂಚನೆಯಿದ್ದು ನಾಳೆ ಜುಲೈ 5ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಮೊದಲು ಆಯಾ ತಾಲೂಕುಗಳಲ್ಲಿ ಪರಿಸ್ಥಿತಿ ಆಧರಿಸಿ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದರು. ಮಳೆ ತೀವ್ರತೆ ಹಿನ್ನಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜನೆ ಘೋಷಿಸಲಾಗಿದೆ.
