ಬೆಂಗಳೂರು: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲೂ ಸಾಧಾರಣ ಮಳೆಯಾಗಲಿದೆ.
ಜಯಪುರ, ಹುಂಚದಕಟ್ಟೆ, ಗೇರುಸೊಪ್ಪ, ಸಿದ್ದಾಪುರ, ಚನ್ನರಾಯಪಟ್ಟಣದಲ್ಲಿ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ.