ಮಂಗಳೂರು: ಮುಂದಿನ 10 ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯಲ್ಲಿ ಈ ಅವಧಿಯಲ್ಲಿ ಅತಿ ಹೆಚ್ಚು (244.4 ಮಿಮೀ ವರೆಗೆ) ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.
ಪರಿಸ್ಥಿತಿಯನ್ನು ನಿಭಾಯಿಸಲು ಅಂತಹ ಪ್ರದೇಶಗಳಲ್ಲಿ ಮುಂಚಿತವಾಗಿ ಡಿ-ವಾಟರಿಂಗ್ ಪಂಪ್‌ಗಳು ಮತ್ತು ಇತರ ಉಪಕರಣಗಳನ್ನು ನಿಯೋಜಿಸಲು ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಡಿಆರ್‌ಎಫ್) ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
