ನಟಿ ರಶ್ಮಿಕಾ ಮಂದಣ್ಣ ಡೀಪ್ಫೇಕ್ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಇದೀಗ ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರ ಜೊತೆ ಮಾತನಾಡಿರುವ ಅವರು, ‘ಯಾವ ನಟಿಯದ್ದೂ ಹಾಗೆ ಆಗಬಾರದು. ಇಂತಹ ಪ್ರಕರಣಗಳಿಗೆ ಸರಕಾರ ಬೇಗ ಸ್ಪಂದಿಸಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ವಿಡಿಯೋ ವೈರಲ್ ಆಗುವ ಮುಂಚೆಯೇ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆದೆಹಲಿ ಪೊಲೀಸರು ಕಳೆದ ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.