main logo

ಆಯೋಧ್ಯೆ ರಾಮಮಂದಿರ ಉದ್ಘಾಟನೆ ದಿನಾಂಕ ಘೋಷಣೆ: ಎಂದು ಗೊತ್ತಾ ಆ ಪುಣ್ಯದಿನ

ಆಯೋಧ್ಯೆ ರಾಮಮಂದಿರ ಉದ್ಘಾಟನೆ ದಿನಾಂಕ ಘೋಷಣೆ: ಎಂದು ಗೊತ್ತಾ ಆ ಪುಣ್ಯದಿನ

ಅಯೋಧ್ಯೆ: ಮುಂದಿನ ವರ್ಷ ಜನವರಿ 21, 22 ಮತ್ತು 23 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ರಾಮಮಂದಿರ ಟ್ರಸ್ಟ್‌ ಸದಸ್ಯರು ತಿಳಿಸಿದ್ದಾರೆ.

“ರಾಮ ಮಂದಿರ ಉದ್ಘಾಟನಾ ಸಮಾರಂಭವು ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿದೆ. ಜನವರಿಯ 21, 22 ಮತ್ತು 23 ರಂದು ಮೂರು ದಿನಾಂಕಗಳನ್ನು ನಿಗದಿಪಡಿಸಲಾಗಿದೆ – ಸಮಾರಂಭಕ್ಕೆ ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುತ್ತೇವೆ, ಪ್ರಮುಖ ಸಾಧುಗಳು ಮತ್ತು ಇತರ ಗಣ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಪಿಟಿಐಗೆ ತಿಳಿಸಿದ್ದಾರೆ.

ಮುಖ್ಯ ಕಾರ್ಯಕ್ರಮವನ್ನು ರಾಜಕೀಯೇತರವಾಗಿ ಇರಿಸಲಾಗುವುದು. ವಿವಿಧ ರಾಜಕೀಯ ಪಕ್ಷಗಳ ಅತಿಥಿಗಳನ್ನು ಸಹ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ. ಸಮಾರಂಭಕ್ಕೆ 136 ಸನಾತನ ಸಂಪ್ರದಾಯಗಳ 25,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ.
ಅಂತಹ ಸಂತರ ಪಟ್ಟಿಯನ್ನು ದೇವಾಲಯದ ಟ್ರಸ್ಟ್ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಸಹಿಯೊಂದಿಗೆ ಆಹ್ವಾನ ಪತ್ರಿಕೆಯನ್ನು ಕಳುಹಿಸಲಾಗುವುದು ಎಂದು ಅವರು ಹೇಳಿದರು. “ರಾಮಲಾಲ ಗರ್ಭಗುಡಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈಗ ಜನವರಿ ತಿಂಗಳಲ್ಲಿ ‘ಪ್ರಾಣ ಪ್ರತಿಷ್ಠಾ’ದ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ” ಎಂದು ದೇವಸ್ಥಾನದ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಹೇಳಿದರು. ಅಯೋಧ್ಯೆಯಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಸುಮಾರು ಒಂದು ತಿಂಗಳ ಕಾಲ ಉಚಿತ ಅನ್ನ, ಆಹಾರ ನೀಡಲು ಟ್ರಸ್ಟ್ ಮುಂದಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!