ಡಿಸಿಎಂ ಡಿಕೆಶಿ ಕೊಟ್ರು ಶಾಕಿಂಗ್ ಸ್ಟೇಟ್ ಮೆಂಟ್
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Bengaluru Rameshwaram Cafe Bomb Blast) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಪ್ರಕರಣಕ್ಕೂ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪಕ್ರರಣಕ್ಕೂ ಸಾಮ್ಯತೆ ಇದೆ. ಈ ಬಗ್ಗೆ ನಮ್ಮ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಗೂ ಸಾಮ್ಯತೆ ಇಲ್ಲ ಎಂದಿದ್ದರು. ಈ ಮೂಲಕ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಗಳ ನಡುವೆ ಮಾಹಿತಿ ಕೊರೆತೆ ಇದೆ ಎದ್ದು ಕಾಣುತ್ತಿದೆ.”
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರೋಪಿ ಬಸ್ನಲ್ಲಿ ಬಂದು ಹೋಗಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಗೆ ಪೊಲೀಸರು 7-8 ತಂಡ ರಚನೆ ಮಾಡಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಎಂದರು.