main logo

ರಾಮೇಶ್ವರಂ ಕೆಫೆ ಸ್ಫೋಟ : ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನ ವಿಚಾರಣೆ

ರಾಮೇಶ್ವರಂ ಕೆಫೆ ಸ್ಫೋಟ : ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನ ವಿಚಾರಣೆ

ಶಿವಮೊಗ್ಗ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿಯ ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಕಳೆದ ವಾರ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಇಬ್ಬರು ಮುಸ್ಲಿಂ ಯುವಕರ ಮನೆಗಳು ಹಾಗು ಮೊಬೈಲ್ ಅಂಗಡಿ ಶೋಧ ನಡೆಸಿದ್ದರು. ಇದೀಗ ಮುಸ್ಲಿಂ ಯುವಕರ ಜೊತೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

error: Content is protected !!