Site icon newsroomkannada.com

ಬಾಲಕಿ ಅತ್ಯಾಚಾರ ಮಾಡಿ ಗರ್ಭದಾನ ಮಾಡಿದ ಉಳ್ಳಾಲ ಪೇಟೆಯ ಆರೋಪಿ ಸೆರೆ

ಉಳ್ಳಾಲ:  12 ವರ್ಷದ ಬಾಲಕಿಯನ್ನು ಪಕ್ಕದ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾದ ಆರೋಪಿ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಎಂಬಾತನನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು 8ನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷ 10 ತಿಂಗಳು ಪ್ರಾಯದ ಬಾಲಕಿಯನ್ನು ಆರೋಪಿಯು ಆಕೆ ಒಬ್ಬಳೇ ಇದ್ದ ಸಂದರ್ಭದಲ್ಲಿಯೂ ಆಗಾಗ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಬಾಲಕಿ ಮಹಿಳಾ ಠಾಣೆಗೆ ದೂರು ನೀಡಿದ್ದಳು.

ಶನಿವಾರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ಮಹಿಳಾ ಠಾಣೆಯ ನಿರೀಕ್ಷಕ ಲೋಕೇಶ್ ಎ.ಸಿ. ತನಿಖೆ ನಡೆಸುತ್ತಿದ್ದಾರೆ.

Exit mobile version