ಚಿಕ್ಕಬಳ್ಳಾಪುರ: 7ನೇ ತರಗತಿ ಸರ್ಕಾರಿ ಶಾಲೆ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾದ ಕುರಿತು ಚಿಕ್ಕಬಳ್ಳಾಪುರ (Chikkaballapura) ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿ ಯುವಕನೇ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದ್ದು, ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತೆಯ ಸ್ಥಿತಿ ನೋಡಿ ಪೋಷಕರು ಕಂಗಾಲಾಗಿದ್ದಾರೆ. ಇದೀಗ ಬಾಲಕಿಯನ್ನ ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರಲ್ಲಿ ಆರೈಕೆ ಮಾಡಲಾಗಿದ್ದು, ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಈ ಪ್ರಕರಣ ಬೆಳಕಿಗೆ ಬಂದಿದೆ.

- 8 March 2024
0
Less than a minute
Tags:
Related Articles
prev
next