Site icon newsroomkannada.com

ಅಪ್ರಾಪ್ತೆ ಮೇಲೆ ಅತ್ಯಾಚಾರ ಕಲ್ಮಡ್ಕದ ಯುವಕನ ಸೆರೆ

ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಿಯ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ಬಾಲಕಿ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜು.7ರಂದು ಹೊಟ್ಟೆನೋವು ಎಂದು ಉಬರಡ್ಕದ ಬಾಲಕಿ ಎಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿಸಿದ್ದರು. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದಾಗಿ ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

Exit mobile version