Site icon newsroomkannada.com

ಹತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಸೆರೆ

ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಕೇಶವ (43) ಬಂಧಿತ ಆರೋಪಿ. ಆರೋಪಿ ಬಾಲಕಿಯ ಮನೆಯ ಪರಿಚಿತನೇ ಆಗಿದ್ದು, ಆಗಾಗ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Exit mobile version