ಶನಿವಾರ, ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದರು.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 7500 ರನ್‌ಗಳ ಮೈಲುಗಲ್ಲನ್ನು ತಲುಪಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾದರು. ರಾಜಸ್ಥಾನ್ ರಾಯಲ್ಸ್ 34 ರನ್ ಗಳಿಸುತ್ತಿದ್ದಂತೆಯೇ ಬೃಹತ್ ದಾಖಲೆ ನಿರ್ಮಿಸಿದರು.
ಇದೇ ವೇಳೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಕೊಹ್ಲಿ ಪ್ರಸ್ತುತ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಹೊಂದಿದ್ದರೆ, ಎಂಎಸ್ ಧೋನಿ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗಿನ ಆಡಿದ 242 ಪಂದ್ಯಗಳಲ್ಲಿ 37ರ ಸರಾಸರಿಯಲ್ಲಿ 113 ರನ್‌ಗಳ ಅತ್ಯುತ್ತಮ ಸ್ಕೋರ್‌ನೊಂದಿಗೆ, ಭಾರತೀಯ ಬ್ಯಾಟಿಂಗ್ ಮಾಂತ್ರಿಕ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳು
ವಿರಾಟ್ ಕೊಹ್ಲಿ 242 ಪಂದ್ಯ – 7519 ರನ್
ಶಿಖರ್ ಧವನ್ 221 ಪಂದ್ಯ – 6755 ರನ್
ಡೇವಿಡ್ ವಾರ್ನರ್ 180 ಪಂದ್ಯ – 6545 ರನ್
ರೋಹಿತ್ ಶರ್ಮಾ 246 ಪಂದ್ಯ – 6280 ರನ್
ಸುರೇಶ್ ರೈನಾ 208 ಪಂದ್ಯ – 5528 ರನ್