main logo

ಮಂಗಳೂರಿನಲ್ಲಿ ಇನ್ಮುಂದೆ ರೇಡಾರ್​ ಕಣ್ಗಾವಲು: ಸಂಚಾರಿ ನಿಯಮ ಉಲ್ಲಂಘಿಸಿದ್ರೆ ದಂಡ ಪಕ್ಕಾ

ಮಂಗಳೂರಿನಲ್ಲಿ ಇನ್ಮುಂದೆ ರೇಡಾರ್​ ಕಣ್ಗಾವಲು: ಸಂಚಾರಿ ನಿಯಮ ಉಲ್ಲಂಘಿಸಿದ್ರೆ ದಂಡ ಪಕ್ಕಾ

: ಮಂಗಳೂರು, ಮೇ 15: ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪಟ್ಟಿಯಲ್ಲಿ ಮಂಗಳೂರು (Mangaluru) ಕೂಡ ಒಂದು. ಸ್ಮಾರ್ಟ್ ಸಿಟಿಯಾಗಿರುವ (Smart city) ಈ ಮಂಗಳೂರು ನಗರ ಇನ್ಮುಂದೆ ಅತ್ಯಾಧುನಿಕ ಕ್ಯಾಮರಾ ಹಾಗೂ ರೇಡಾರ್ ಕಣ್ಗಾವಲಿಗೆ ಒಳಪಡಲಿದೆ. ನಗರದ ಆಯಕಟ್ಟಿನ ಪ್ರದೇಶಗಳ ಮೇಲೆ ರೇಡಾರ್ ಹದ್ದಿನ ಕಣ್ಣಿಟ್ಟಿದ್ದು ಸಂಚಾರ ನಿಯಂತ್ರಣ ವ್ಯವಸ್ಥೆಯು ಫುಲ್ ಅಪ್ಟೇಡ್ ಆಗಿದೆ. ಈ ಕುರಿತಾದ ಒಂದು ಸಂಪೂರ್ಣ ವರದಿ ಇಲ್ಲಿದೆ ಮುಂದೆ ಓದಿ.
[ಮಂಗಳೂರು ನಗರದಲ್ಲಿ ದಿನೇ ದಿನೇ ಟ್ರಾಫಿಕ್ ಕಿರಿಕಿರಿ ಹೆಚ್ಚಾಗುತ್ತಿದೆ. ಸಂಚಾರಿ ಪೊಲೀಸರಿಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಮೂಗುದಾರ ಹಾಕುವುದೇ ಸವಲಾಗಿ ಪರಿಣಮಿಸುತ್ತಿದೆ. ಇದಕ್ಕಾಗಿಯೇ ಸ್ಮಾರ್ಟ್ ನಗರದಲ್ಲಿ ಸ್ಮಾರ್ಟ್ ಆದ ತಂತ್ರಜ್ಞಾನಗಳನ್ನು ಜಾರಿಗೆ ತರಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅತ್ಯಾಧುನಿಕ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಕ್ಯಾಮರಾ ಹಾಗೂ ರೇಡಾರ್ ವ್ಯವಸ್ಥೆ ಅಳವಡಿಸಲಾಗಿದೆ: ಮೂಲಕ ನಗರದ ರಸ್ತೆಗಳಲ್ಲಿ ನಡೆಯುವ ಅನುಮಾನಾಸ್ಪದ ಚುಟುವಟಿಕೆ ಸೇರಿದಂತೆ ವಾಹನ ಸಂಚಾರದ ಮೇಲೂ ಕಣ್ಗಾವಲು ಇಡಲಾಗುತ್ತಿದೆ. ಅತ್ಯಾಧುನಿಕ ಎ.ಐ ಕ್ಯಾಮರಾ ವಾಹನ ಸವಾರರು ಹೆಲೈಟ್‌ ಧರಿಸದಿದ್ದರೆ, ಚಾಲನೆ ವೇಳೆ ಮೊಬೈಲ್ ಬಳಸಿದರೆ, ತ್ರಿಬಲ್ ರೈಡ್, ಸೀಟು ಬೆಲ್ಟ್ ಧರಿಸದಿದ್ದರೆ ನಂಬರ್ ಪ್ಲೇಟ್ ಸ್ಕಾನ್ ಮಾಡಿ ಮೊಬೈಲ್‌ಗೆ ದಾಖಲೆ ಸಹಿತ ದಂಡದ ನೋಟಿಸ್ ಕಳುಹಿಸುತ್ತೆ. ಜೊತೆಗೆ ಎಸ್.ಎಂ.ಎಸ್ ಸಂದೇಶವನ್ನು ರವಾನೆ ಮಾಡುತ್ತೆ.

ಟ್ರಾಫಿಕ್ ನಿಯಮ ಉಲ್ಲಂಘನೆ ಅತ್ಯಾಧುನಿಕ ಕ್ಯಾಮರಾದಲ್ಲಿ ಸೆರೆಯಾಗಲಿದೆ. ಇದು ಕಮಾಂಡ್ ಕಂಟ್ರೋಲ್ ರೂಂನಿಂದ ಪೊಲೀಸರಿಗೆ ರವಾನೆಯಾಗಿ, ತಕ್ಷಣವೇ ಸಂಚಾರಿ ಪೊಲೀಸರಿಂದ ನಿಯಮ ಉಲ್ಲಂಘಿಸಿದವರ ಮೊಬೈಲ್‌ಗೆ ನೋಟಿಸ್‌ ಹಾಗೂ ಎಸ್‌ಎಂಎಸ್‌ ರವಾನಿಸಲ್ಪಡಲಿದೆ. ಮಿತಿ ಮೀರಿದ ವೇಗದಲ್ಲಿ ಸಂಚರಿಸಿದರೆ ರೇಡಾರ್​ನಿಂದ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ಫೋಟೋ ಸಹಿತ ದೂರು ದಾಖಲಾಗಲಿದೆ.

ಪ್ರಸ್ತುತ ಕಮಾಂಡ್ ಕಂಟ್ರೋಲ್ ಸೆಂಟರ್‌ನ ಎರಡನೇ ಹಂತದ ಕೆಲಸಗಳು ನಡೆಯುತ್ತಿದ್ದು, ಇದರದಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಬ್ಯಾಕ್ ಆ್ಯಂಡ್ ಪ್ರೋಗ್ರಾಮಿಂಗ್ ಮೂಲಕ ಕಾರಿಡಾರ್ ಮ್ಯಾನೇಜ್‌ಮೆಂಟ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಮೂಲಕ ನಗರದಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಣಗೊಳ್ಳಲಿದೆ.
ಟ್ರಾಫಿಕ್ ದಟ್ಟನೆ ಹೆಚ್ಚಾದಲ್ಲಿ ಸಿಗ್ನಲ್‌ನಲ್ಲಿ ಬದಲಾವಣೆ ಸೇರಿದಂತೆ ಮೊದಲಾದವನ್ನು ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಮಾಡಲಿದೆ. ಈಗಾಗಲೇ 75ಕ್ಕೂ ಹೆಚ್ಚು ಕ್ಯಾಮೆರಾ ಸ್ಮಾರ್ಟ್ ಸಿಟಿಯಿಂದ ಅಳವಡಿಸಲಾಗಿದ್ದು ಮುಂದೆ 250ಕ್ಕೂ ಹೆಚ್ಚು ಅತ್ಯಾಧುನಿಕ ಕ್ಯಾಮೆರಾ ಅಳವಡಿಸಬೇಕಾಗಿದೆ. ಒಟ್ಟಿನಲ್ಲಿ ಇನ್ಮುಂದೆ ಮಂಗಳೂರು ನಗರದಲ್ಲಿ ವಾಹನಸವಾರರು ಬೇಕಾಬಿಟ್ಟಿ ಸಂಚಾರ ಸುಲಭವಲ್ಲ ಎಂಬುದನ್ನು ಅರಿತು ತಮ್ಮ ಸುರಕ್ಷತೆಗೆ ಮಹತ್ವ ನೀಡಬೇಕಾದ ಅವಶ್ಯಕತೆ ಇದೆ.

Related Articles

Leave a Reply

Your email address will not be published. Required fields are marked *

error: Content is protected !!