main logo

ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ : ಪಂಚ ನ್ಯಾಯ, 25 ಭರವಸೆ

ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ : ಪಂಚ ನ್ಯಾಯ, 25 ಭರವಸೆ

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಪಕ್ಷವು ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ.
‘ಯುವ ನ್ಯಾಯ’, ‘ನಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಹಿಸ್ಸೆದಾರಿ ನ್ಯಾಯ’ ಹಾಗೂ ಖಾತರಿಗಳು ಸೇರಿದಂತೆ ಪಂಚ ನ್ಯಾಯ ಅಥವಾ ನ್ಯಾಯದ ಐದು ಸ್ತಂಭಗಳಿಗೆ ಒತ್ತು ನೀಡಿದೆ.
ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಭರವಸೆ ನೀಡಿದೆ. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್​ ಸರ್ಕಾರ ರಚನೆಯಾದರೆ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂ.ಗಳ ನೆರವು ನೀಡುವ ಮತ್ತು ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದೆ.
ಯುವ ನ್ಯಾಯ ಅಡಿಯಲ್ಲಿ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಭರವಸೆ ಮತ್ತು ಒಂದು ವರ್ಷದವರೆಗೆ ಅಪ್ರೆಂಟಿಸ್‌ಷಿಪ್ ಕಾರ್ಯಕ್ರಮದಡಿಯಲ್ಲಿ ಯುವಕರಿಗೆ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ.
ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಪ್ರತಿ ವರ್ಷ ಎಂಎಸ್‌ಪಿ ಘೋಷಿಸುವ ಕಾನೂನು ಖಾತರಿ ನೀಡುವುದಾಗಿ ಘೋ‍ಷಿಸಿದೆ.
ಕಾರ್ಮಿಕ ನ್ಯಾಯ ಅಡಿಯಲ್ಲಿ, ಕಾರ್ಮಿಕರಿಗೆ ಆರೋಗ್ಯದ ಹಕ್ಕನ್ನು ಒದಗಿಸುವುದು, ದಿನಕ್ಕೆ ಕನಿಷ್ಠ 400 ರೂ. ವೇತನ ಮತ್ತು ನಗರ ಉದ್ಯೋಗ ಖಾತರಿಯನ್ನು ಖಚಿತಪಡಿಸುವುದಾಗಿ ಭರವಸೆ ನೀಡಿದೆ. ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ನಮ್ಮ ಪ್ರಣಾಳಿಕೆ ಬಡವರಿಗೆ ಮೀಸಲಾಗಿದೆ ಎಂದು ಖರ್ಗೆ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!