Site icon newsroomkannada.com

ಆಗುಂಬೆ ಘಾಟಿಯಲ್ಲಿ ಘನವಾಹನಗಳಿಗೆ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಉಡುಪಿ ರಸ್ತೆಯ ಆಗುಂಬೆ ಘಾಟಿಯ 6, 7 ಹಾಗೂ 11 ನೇ ತಿರುವಿನಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕು ಕಂಡುಬಂದಿದೆ. ಅಲ್ಲದೆ ರಸ್ತೆ ಕುಸಿತವಾಗಿದ್ದು ಈ ಕಾರಣದಿಂದ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಹೆಚ್ಚಿನ ಮಳೆಯಿಂದಾಗಿ ತಡೆಗೋಡೆಯೂ ಕುಸಿದಿರುವುದು ಕಂಡು ಬಂದಿದ್ದು ಈ ರಸ್ತೆಯಲ್ಲಿ ಭಾರಿ ವಾಹನಗಳು ಸಂಚರಿಸಿದಲ್ಲಿ ರಸ್ತೆ ಮತ್ತಷ್ಟು ಕುಸಿಯುವ ಅಪಾಯವಿದೆ. ಈ ಕಾರಣದಿಂದ ತಕ್ಷಣದಿಂದ ಜಾರಿಗೆ ಬರುವಂತೆ (7-07-2023 ರಿಂದ 15-09-2023 ರವರೆಗೆ) ಭಾರಿ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿಲ್ಲ. ಆದರೆ ಲಘು ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಆದೇಶದಲ್ಲಿ ತಿಳಿಸಿದಾರೆ.
ಭಾರಿ ವಾಹನಗಳು ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ -ಮಾಳ ಘಾಟ್‌ -ಕಾರ್ಕಳ- ಉಡುಪಿ ಮಾರ್ಗವನ್ನು ಬಳಸಬೇಕಿದೆ. 2 ನೇ ಮಾರ್ಗವಾಗಿ ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ – ಕುಂದಾಪುರ- ಉಡುಪಿ ಮಾರ್ಗವನ್ನು ಬಳಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Exit mobile version