main logo

ಒಕ್ಕಲಿಗರ ಕಾರ್ಯಕ್ರಮದಲ್ಲಿ ಮಾತನಾಡಿದ್ದಕ್ಕೆ ಸಿಎಂ ಕುರ್ಚಿಯಿಂದ ಇಳಿಸಿದರು: ಸದಾನಂದ ಗೌಡ

ಒಕ್ಕಲಿಗರ ಕಾರ್ಯಕ್ರಮದಲ್ಲಿ ಮಾತನಾಡಿದ್ದಕ್ಕೆ ಸಿಎಂ ಕುರ್ಚಿಯಿಂದ ಇಳಿಸಿದರು: ಸದಾನಂದ ಗೌಡ

ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸ್ಪೋಟಕ ಮಾಹಿತಿಯನ್ನು ನೀಡಿದರು.ಅವರು ಕಡಬದಲ್ಲಿ ಮಂಗಳವಾರ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ನಾಯಕರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು.

“ನಾನು ಮುಖ್ಯ ಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಬೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ಸ್ವಾಮೀಜಿಯವರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಸಮಾರಂಭದಲ್ಲಿ ನಾನು ಒಂದು ಮಾತನ್ನು ಹೇಳಿದ್ದೆ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾದೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು. ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲು ಹೇಳಿದರು’’ ಎಂದು ಬೇಸರ ವ್ಯಕ್ತಪಡಿಸಿದ ಸದಾನಂದ ಗೌಡ ಪರೋಕ್ಷವಾಗಿ ರಾಜ್ಯ ಅಂದಿನ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದರು.

ಬಿಜೆಪಿ ಪಕ್ಷ ಎಲ್ಲವನ್ನೂ ಕೊಟ್ಟಿದೆ ಎಂದು ಹೇಳುತ್ತಲೇ ಇವತ್ತಿನ ರಾಜಕೀಯ ವ್ಯವಸ್ಥೆಯ ವಿರುದ್ಧ ಹರಿಹಾಯ್ದರು, ರಾಜಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ, ಹರಕು ನಾಲಗೆ, ಚೀಲ ತುಂಬಾ ದುಡ್ಡು, ಗುಂಪುಗಾರಿಕೆ ಇದರಿಂದಲೇ ರಾಜಕೀಯ ನಡೆಯುತ್ತಿದೆ ಎಂದು ಗೊತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಬಾಕಿ ಎಲ್ಲದಕ್ಕಿಂತಲೂ ನನ್ನ ಪಕ್ಷ ಒಳ್ಳೆಯದು ಅಂತ ಹೇಳಿ ನಾನು ಅದರಲ್ಲಿ ಇರುವಂತ ಪ್ರಯತ್ನ ಮಾಡುತ್ತಿದ್ದೇನೆ’’ ಎಂದರು.

“ಸಮಾಜ, ನನ್ನ ಪಕ್ಷ ಮೂವತ್ತು ವರ್ಷದಲ್ಲಿ ನನಗೆ ಎಲ್ಲವನ್ನೂ ಕೊಟ್ಟಿದೆ. ಚುನಾವಣಾ ರಾಜಕಾರಣದಿಂದ ನಿವೃತ್ತಿಯನ್ನು ಘೋಷಿಸುತ್ತಿದ್ದೇನೆ ಎಂದು ಸಮಾರಂಭದಲ್ಲಿ ಪುನರುಚ್ಚರಿಸಿದ ಸದಾನಂದ ಗೌಡ ಮುಂದಿನ ದಿನ ಪಕ್ಷಕ್ಕಾಗಿ ದುಡಿಯುವ ದಿನ ಮಾತ್ರ ಉಳಿದಿದೆ. ಜನರ ಕೆಲಸ ಮಾಡಲು ನನ್ನ ಅನುಭವ ಸಾಕು ಎಂದು ಅವರು ತಿಳಿಸಿದರು.

Related Articles

Leave a Reply

Your email address will not be published. Required fields are marked *

error: Content is protected !!