Site icon newsroomkannada.com

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ (ಜುಲೈ 27) ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜುಲೈ 27ರಂದು ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಆದರೆ ಪಿಯು, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Exit mobile version