Site icon newsroomkannada.com

ಆತ್ಮಹತ್ಯೆಗೆ ಶರಣಾದ ಹಾಸನ ಜಿಲ್ಲಾಧಿಕಾರಿ ಕಚೇರಿ ಎಸ್‌ಡಿಸಿ

ಹಾಸನ: ಹಾಸನ ಜಿಲ್ಲಾಧಿಕಾರಿ ಕಚೇರಿ ಎಸ್‌ಡಿಸಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ರಕ್ಷಣಾಪುರಂನಲ್ಲಿ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಚಿತ್ರಾ (33) ಜಿಲ್ಲಾಧಿಕಾರಿ ಕಚೇರಿ ಗ್ರಾಮ ಒನ್ ಕೇಂದ್ರದಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ವಿಎ ಆಗಿದ್ದ ಸುಚಿತ್ರಾ ಪತಿ ಕೃಷ್ಣಮೂರ್ತಿ. ಅಪಘಾತದಲ್ಲಿ ನಿಧನ ಹೊಂದಿದ್ದರಿಂದ ಪತ್ನಿ ಸುಚಿತ್ರಾಗೆ ಅನುಕಂಪದ ಆಧಾರದ ಮೇಲೆ ಎಸ್‌ಡಿಸಿ ಹುದ್ದೆ ನೀಡಲಾಗಿತ್ತು.

ನಿನ್ನೆ ರಾತ್ರಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಖಲಾಗಿದೆ.

Exit mobile version