ಪುತ್ತೂರು: ಕೆಲವೇ ದಿನಗಳ ಹಿಂದಷ್ಟೆ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಹಿ ನೆನಪು ಮಾಸುವ ಮುನ್ನವೇ ಇನ್ನೋರ್ವ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇಲ್ಲಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಸೆಕೆಂಡ್ ಪಿಯು ವ್ಯಾಸಂಗ ಮಾಡುತ್ತಿದ್ದ ವೀಕ್ಷಿತ್ (17) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ವೀಕ್ಷಿತ್ ಕುರಿಯ ಪಡ್ಪು ನಿವಾಸಿಯಾಗಿದ್ದು ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೀಕ್ಷಿತ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.