main logo

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಎಂಬ ಸುದ್ದಿ ಸುಳ್ಳು : ಪರೀಕ್ಷಾ ಮಂಡಳಿ ಸ್ಪಷ್ಟನೆ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಎಂಬ ಸುದ್ದಿ ಸುಳ್ಳು : ಪರೀಕ್ಷಾ ಮಂಡಳಿ ಸ್ಪಷ್ಟನೆ

ಬೆಂಗಳೂರು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಸಂಬಂಧ ಏಪ್ರಿಲ್ 3 ರ ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ಆಯೋಜಿಸಿದೆ ಎಂದು ಹಬ್ಬಿರುವ ಮಾಹಿತಿ ಸುಳ್ಳು ಎಂದು ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಸ್ಪಷ್ಟಪಡಿಸಿದ್ದಾರೆ.ಕಿಡಿಗೇಡಿಗಳು ಮಂಡಳಿ ಹೆಸರಿನಲ್ಲಿ ನಕಲಿ ಪತ್ರಿಕಾ ಹೇಳಿಕೆಯನ್ನು ಸೃಷ್ಟಿಸಿ ಸಾಮಾಜಕ ಜಾಲತಾಣದಲ್ಲಿ ಹರಿಬಿಟ್ಟು ಗೊಂದಲ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಮಂಡಳಿಯಿಂದ ಅಂತಹ ಯಾವುದೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ.

 

ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

 

ನಕಲಿ ಸುತ್ತೋಲೆಯಲ್ಲಿ ಇರೋದು ಏನು?

 

 

 

ಮಾರ್ಚ್ 20230 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ:11/03/2014 ರಿಂದ 21/03/2024ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯವಾದನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: (M11/2121 ರಂದು ಬೆಳಿಗ್ಗೆ 11:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಟಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ DO 03/04/20248 ವೀಕ್ಷಿಸಬಹುದಾಗಿದೆ

Related Articles

Leave a Reply

Your email address will not be published. Required fields are marked *

error: Content is protected !!