Site icon newsroomkannada.com

ವಿಶ್ವಕಪ್‌ ಕ್ರಿಕೆಟ್‌ ನಲ್ಲಿ ಭಾರತಕ್ಕೆ ಸೋಲು ಸಂಭ್ರಮಿಸಿದ ಏಳು ವಿದ್ಯಾರ್ಥಿಗಳು ಅಂದರ್‌

ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾಟದಲ್ಲಿ ಭಾರತ ಸೋಲು ಕಂಡಿತ್ತು. ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿ ಭಾರತದ ಸೋಲಿನ ವಿಮರ್ಷೆ ಹಲವು ದಿನಗಳವರೆಗೆ ನಡೆದಿತ್ತು.

ಇದೀಗ ಏಕದಿನ ವಿಶ್ವಕಪ್ ಫೈನಲ್‌ ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲಿಗೆ ಸಂಭ್ರಮಾಚರಿಸಿದ ಆರೋಪದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶ್ವವಿದ್ಯಾನಿಲಯವೊಂದರ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಓದುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version