ಲಕ್ನೋ: ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ (Ayodhya) ಶ್ರೀ ರಾಮಮಂದಿರ (Rama Mandir) ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ವರ್ಷದ ಜನವರಿಯಲ್ಲಿ ಈ ಮಂದಿರ ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ.
ಇದೀಗ, ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ (Shri Ram Janmbhoomi Teerth Kshetra Trust) ತನ್ನ ‘X’ (ಹಿಂದೆ ಟ್ವಿಟ್ಟರ್ ಎಂದು ಕರೆಯಲ್ಪಡುತ್ತಿತ್ತು) ಖಾತೆಯಲ್ಲಿ ಭವ್ಯ ಮಂದಿರದ ಮೊದಲ ಮಹಡಿಯ ಫೊಟೋಗಳನ್ನು ಹಂಚಿಕೊಂಡಿದೆ.
श्री राम जन्मभूमि मंदिर – प्रथम तल
Shri Ram Janmabhoomi Mandir – First Floor pic.twitter.com/OUEw7a9xLh
— Shri Ram Janmbhoomi Teerth Kshetra (@ShriRamTeerth) September 5, 2023
2024ರ ಜನವರಿ 14ರಿಂದ 24ರೊಳಗೆ ಈ ಮಂದಿರದ ಗರ್ಭಗೃಹದಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಭರ್ಜರಿ ಸಿದ್ಧತೆಗಳು ನಡೆದಿವೆ.
ಜ.14 ಮಕರ ಸಂಕ್ರಮಣದ ಪುಣ್ಯ ದಿನದಂದು ಮಂದಿರ ಉದ್ಘಾಟನೆಗೆ ಸಂಬಂಧಿಸಿದ ಪೂಜಾ ವಿಧಿವಿಧಾನಗಳು ಆರಂಭವಾಗಲಿದೆ.
ರಾಮ್ ಲಲ್ಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಬೇಕು ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಜ್ ಅವರು ಈಗಾಗಲೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
136 ಸನಾತನ ಸಂಪ್ರದಾಯದ 25 ಸಾವಿರಕ್ಕೂ ಮಿಕ್ಕಿ ಹಿಂದು ಧಾರ್ಮಿಕ ಮುಖಂಡರನ್ನು ಈ ಕಾರ್ಯಕ್ರಮಕ್ಕೆ ಈಗಾಗಲೇ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ.
ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರವನ್ನು ಕಣ್ತುಂಬಿಕೊಳ್ಳಲು ಜಗತ್ತಿನಾದ್ಯಂತ ಇರುವ ಹಿಂದು ಬಾಂಧವರು ಕಾತರದಿಂದ ಕಾಯುತ್ತಿದ್ದಾರೆ.