Site icon newsroomkannada.com

ಸುಣ್ಣದ ಡಬ್ಬಿ ನುಂಗಿ ಒದ್ದಾಡಿದ ನಾಗಪ್ಪ: ವೈದ್ಯರಿಂದ ಶಸ್ತ್ರಚಿಕಿತ್ಸೆ

ಮಂಗಳೂರು: ಸುಣ್ಣದ ಪ್ಲಾಸ್ಟಿಕ್ ಡಬ್ಬವೊಂದನ್ನು ನುಂಗಿ ಭಾರಿ ಸಂಕಟ ಪಡುತ್ತಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಕುತೂಹಲಕಾರಿ ಸುದ್ದಿಯೊಂದು ಹೊರಬಿದ್ದಿದೆ.ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ಸಮೀಪದಲ್ಲಿದ್ದ ಮನೆಯವರು ಜೂನ್ 6ರಂದು ವಗ್ಗದ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದು,ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಶ್ಯಾಂ ಹಾವನ್ನು ಬಿಲದಿಂದ ಮೆಲ್ಲಗೆ ಹೊರ ತೆಗೆದು ರಕ್ಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಈ ನಾಗರಹಾವು ಹೊರಬರಲು ಹೆಣಗಾಡುತ್ತಿತ್ತು.ಈ ವೇಳೆ ಅದರ ತಲೆಯ ಕೆಳಭಾಗದಲ್ಲಿ ಎರಡು ಗಾಯಗಳಾಗಿತ್ತು ಎಂದು ತಿಳಿದು ಬಂದಿದೆ.
ಇದಕ್ಕಾಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ನಿರ್ಧರಿಸಿ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತರಲಾಯಿತು.ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದು ಗಮನಿಸಿದರು.ನಂತರ ಎಕ್ಸ್ ರೇಯನ್ನೂ ಮಾಡಿದ್ದಾರೆ.ಆಗ ಅದರ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ವಸ್ತುವಿರುವುದು ಗಮನಕ್ಕೆ ಬಂದಿದೆ ಎಂಬ ಸಂಗತಿ ಹೊರಬಿದ್ದಿದೆ. ಕೂಡಲೇ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಲು ಮುಂದಾದ ವೈದ್ಯರು ಅದಕ್ಕೆ ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ.ಬಳಿಕ ಕೆಲವು ಗಂಟೆಗಳ ಶಸ್ತ್ರ ಚಿಕಿತ್ಸೆ ಬಳಿಕ ಹೊಟ್ಟೆಯೊಳಗಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

Exit mobile version