Site icon newsroomkannada.com

ಸಾಫ್ಟ್‌ವೇರ್ ಉದ್ಯೋಗಿ ಯುವತಿ ಆತ್ಮಹತ್ಯೆ

ಕಾರ್ಕಳ: ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ.

ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version