ಮಂಗಳೂರು: ದಕ್ಷಿಣ ಕನ್ನಡ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗನೇ ತಾಯಿಯ ಮೇಲೆ ಅತ್ಯಾಚಾರ ನಡೆಸಲು ಮಂದಾಗಿದ್ದು, ಈ ವೇಳೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾನೆ.
ದುರ್ಗಾನಗರ ನಿವಾಸಿ ರತ್ನ ಶೆಟ್ಟಿ(62) ಮೃತ ದುರ್ದೈವಿ. ಪುತ್ರ ರವಿರಾಜ್ ಶೆಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಒಪ್ಪಿರಲಿಲ್ಲ ಈ ವೇಳೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾನೆ.
ಅಕ್ಟೋಬರ್ 26 ರ ರಾತ್ರಿ ಈ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ತಾಯಿ ಮೇಲೆ ಅತ್ಯಚಾರ ಮಾಡಲು ಯತ್ನಿಸಿದ್ದಾಗಿ ಹೇಳಿದ್ದಾನೆ. ಅತ್ಯಚಾರಕ್ಕೆ ಒಪ್ಪದ ಕಾರಣ ಕೊಂದಿದ್ದಾಗಿ ಹೇಳಿದ್ದಾನೆ. ಈ ಬಗ್ಗೆ ಬಜ್ಪೆ ಪೊಲೀಸರಿಂದ ತನಿಖೆ ಮುಂದುವರಿದಿದೆ.