ಮಂಗಳೂರು: ಸೌಜನ್ಯ ಕೊಲೆ ಪ್ರಕರಣ ನಡೆದು 11 ವರ್ಷವಾದರು ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಇತ್ತೀಚಿಗೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾದ ಬೆನ್ನಲ್ಲೇ ಪ್ರಕರಣವು ಇದೀಗ ಕಾನತ್ತೂರಿನ ದೈವ ಮೆಟ್ಟಿಲೇರಿದೆ.
ಇದೀಗ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರುವ ಕಾರಣಕ್ಕೆ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ ಜೈನ್ ಕಾನತ್ತೂರಿನ ದೈವದ ಎದುರು ಆಣೆ ಪ್ರಮಾಣ ಮಾಡಿ ಬಂದಿದ್ದಾರೆ. ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಈ ಮೂವರು ಕೂಡ ನಾವು ಯಾವುದೇ ತಪ್ಪು ಮಾಡಿಲ್ಲ. ನಮ್ಮ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ, ವಿಠಲ ಗೌಡ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ದೂರಿದ್ದರು. ಮಾತ್ರವಲ್ಲ ಮಹೇಶ್ ಶೆಟ್ಟಿ ತಿಮರೋಡಿ, ವಿಠಲ ಗೌಡ ಹೇಳಿದಂತೆ ಕಾನತ್ತೂರಿನಲ್ಲಿ ಪ್ರಮಾಣ ಮಾಡಿದ್ದೇವೆ. ಧೈರ್ಯವಿದ್ದರೆ ಅವರೂ ಕೂಡ ಬಂದು ಪ್ರಮಾಣ ಮಾಡಲಿ ಎಂದು ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ ಜೈನ್ ತಿಳಿಸಿದ್ದಾರೆ.