ಮಂಗಳೂರು: ಸೌಜನ್ಯ ಹೋರಾಟಕ್ಕೆ ಒಡನಾಡಿ ಸಂಸ್ಥೆ ಎಂಟ್ರಿ ಕೊಟ್ಟಿದ್ದು, ಸೋಮವಾರ ಸೌಜನ್ಯಾ ಪರ ಹೋರಾಟಗಾರರನ್ನು ಒಡನಾಡಿ ಸಂಸ್ಥೆ ಮುಖಂಡರು ಭೇಟಿಯಾಗಿದ್ದಾರೆ.
ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ ಇದೀಗ ರಾಜ್ಯಾದ್ಯಂತ ಸೌಜನ್ಯಾ ಪರ ಹೋರಾಟ ನಡೆಸಲಿದೆ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ಒಡನಾಡಿಯ ಸ್ಥಾಪಕ ಕಾರ್ಯದರ್ಶಿ ಸ್ಟಾಲಿನ್, ಸೌಜನ್ಯಾ ಪ್ರಕರಣ ತಲೆ ತಗ್ಗಿಸುವಂತಹ ಘಟನೆಯಾಗಿದ್ದು, ಅತ್ಯಾಚಾರ ಮಾಡಿದ ಪಾಪಿಗಳನ್ನು ಇನ್ನೂ ನ್ಯಾಯದ ಕಟ ಕಟೆಗೆ ತರಲಾಗಿಲ್ಲ, ದೇಶದ ಕಾನೂನಿಗೆ ಪಾಪಿಗಳಿಗೆ ಶಿಕ್ಷೆ ನೀಡಲು ಸಾಧ್ಯವಾಗಿಲ್ಲ ಎಂಬುದು ನಗೆಪಾಟಿಲಿನ ಸಂಗತಿ. ಸಿಬಿಐ ಘನತೆಯನ್ನು ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರುತನಿಖೆಯಾಗಬೇಕು. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.