main logo

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ವಿದೇಶಕ್ಕೆ ಹೋದರಾ ಸಂಸದ

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ವಿದೇಶಕ್ಕೆ ಹೋದರಾ ಸಂಸದ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ  ಇದೀಗ ಆದೇಶ ಹೊರಬಿದ್ದಿದೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ (SIT) ತನಿಖೆ ನಡೆಸುವಂತೆ ಮಹಿಳಾ ಆಯೋಗದ  ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಮಾಹಿತಿ ನೀಡಿದ್ದಾರೆ.

 

ಪ್ರಜ್ವಲ್ ರೇವಣ್ಣ ವಿಡಿಯೋ ತನಿಖೆ ಹೊಣೆ ವಿಶೇಷ ತಂಡಕ್ಕೆ

 

 

 

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಜೌಧರಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ್‌ಗೆ ಪತ್ರ ಬರೆದಿದ್ದರು. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಇದರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ.

 

 

 

ಟ್ವೀಟ್ ಮೂಲಕ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

 

 

 

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ” ಅಂತ ಸಿಎಂ ಟ್ವೀಟ್ ಮಾಡಿದ್ದಾರೆ.ವಿದೇಶಕ್ಕೆ ಹೋದರಾ ಪ್ರಜ್ವಲ್ ರೇವಣ್ಣ?

 

 

 

ಇನ್ನು ಒಂದೆಡೆ ವಿಡಿಯೋ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದ್ದಂತೆ, ಅತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿಜೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ? ಅಥವಾ ತನಿಖೆಗೆ ವಿಶೇಷ ತಂಡ ರಚನೆ ಆಗುತ್ತಿದೆ ಅಂತ ತಿಳಿದು ಹೋದರಾ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ

Related Articles

Leave a Reply

Your email address will not be published. Required fields are marked *

error: Content is protected !!