Site icon newsroomkannada.com

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವೇಳೆ 5 ಲಕ್ಷ ದೇವಳಗಳಲ್ಲಿ ವಿಶೇಷ ಕಾರ್ಯಕ್ರಮ

ಅಯೋಧ್ಯೆ (ಯುಪಿ): ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ (ವಿಗ್ರಹ ಪ್ರತಿಷ್ಠಾಪನೆ)ಗೆ 10 ದಿನಗಳ ಮೊದಲು ದೇಶಾದ್ಯಂತ ಸುಮಾರು ಐದು ಲಕ್ಷ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತಯಾರಿ ನಡೆದಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಈ ಬಗ್ಗೆ ವಿವರಣೆ ನೀಡಿದ್ದು, ರಾಮನಾಮ-ಸಂಕೀರ್ತನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶದ ವಿವಿಧ ದೇವಾಲಯಗಳಲ್ಲಿ ಸಂಕೀರ್ಥನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದ ಅನುಭವ ಆರ್‌ಎಸ್‌ಎಸ್‌ ಗೆ ಇದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗಾಗಿ ಎಲ್ಲರೂ ಅಯೋಧ್ಯೆಗೆ ಬರಲು ಸಾಧ್ಯವಿಲ್ಲ. ಹೀಗಾಗಿ ರಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಮೊದಲು ದೇಶಾದ್ಯಂತ ಸುಮಾರು ಐದು ಲಕ್ಷ ದೇವಾಲಯಗಳಲ್ಲಿ ನಾಮಸಂಕೀರ್ತನೆ ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತನೆ ನಡೆದಿದೆ ಎಂದರು.

ವಿಗ್ರಹ ಪ್ರತಿಷ್ಠಾಪನೆ ವೇಳೆ ಅಯೋಧ್ಯೆಗೆ ಭೇಟಿ ನೀಡುವ ಲಕ್ಷಾಂತರ ಭಕ್ತರಿಗೆ ಮಾಡಬೇಕಾದ ವ್ಯವಸ್ಥೆಗಳ ಬಗ್ಗೆ ಟ್ರಸ್ಟ್‌ನ ಸದಸ್ಯರು ವಿವಿಧ ತಯಾರಿ ನಡೆಸಿದ್ದಾರೆ. ದೂರದರ್ಶನದಲ್ಲಿ ಪ್ರಾಣ ಪ್ರತಿಷ್ಠೆಯನ್ನು ನೇರ ಪ್ರಸಾರ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.

Exit mobile version