main logo

ಪಿಲಿಕುಳ ಉದ್ಯಾನವನಕ್ಕೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಸೇರ್ಪಡೆ

ಪಿಲಿಕುಳ ಉದ್ಯಾನವನಕ್ಕೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಸೇರ್ಪಡೆ

ಮಂಗಳೂರು : ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಒಂದು ಜತೆ ತೋಳ ಸೇರ್ಪಡೆಯಾಗಿದೆ. ಈ ತೋಟವನ್ನು ಪ್ರಾಣಿ ವಿನಿಮಯ ಯೋಜನೆ ಅಡಿಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ತರಿಸಿಕೊಳ್ಳಲಾಗಿದೆ.

ಹೊಸ ಜಗತ್ತಿನ ಮಂಗಗಳೆಂದೆ ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಕೂಡಾ ಸೇರ್ಪಡೆಯಾಗಿದ್ದು, ಇವು ಮಧ್ಯ ಮತ್ತು ದಕ್ಷಿಣ ಅಮೆರಿಕದಲ್ಲಿ ಕಂಡು ಬರುವ ಚಿಕ್ಕ ಜಾತಿಯ ಮಂಗಗಳಾಗಿವೆ. ಮೆಕ್ಸಿಕೋ ದೇಶದಲ್ಲಿ ಕಂಡು ಬರುವ ಬ್ಲೂ ಗೋಲ್ಡ್ ಮಕಾವ್, ಆಸ್ಟ್ರೇಲಿಯಾದಲ್ಲಿ ಕಂಡು ಬರುವ ಗಾಲಾ, ದಕ್ಷಿಣ ಆಫ್ರಿಕಾ ಖಂಡದ ಟುರಾಕೋ ಪಕ್ಷಿಗಳನ್ನು ಕೂಡಾ ಪಿಲಿಕುಳಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಹೇಳಿದರು.

ಈ ಪ್ರಾಣಿ, ಪಕ್ಷಿಗಳಿಗೆ ಆವರಣ ಸಮುಚ್ಚಯ ನಿರ್ಮಿಸಲು ರಿಲಾಯನ್ಸ್ ಫೌಂಡೇಶನ್ ಒಂದು ಕೋಟಿ ರೂ. ದೇಣಿಗೆ ನೀಡಿದೆ. ಜೊತೆಗೆ ಹೊಸತಾಗಿ ಸೇರ್ಪಡೆಯಾದ ಪ್ರಾಣಿ ಪಕ್ಷಿಗಳಿಗೆ ಹೊಂದುವಂತಹ ನೈಸರ್ಗಿಕ ವಾತವರಣ ಸೃಷ್ಟಿಸಲಾಗಿದೆ. ಆವರಣದ ಒಳಗೆ ಪ್ರಾಣಿಗಳಿಗಾಗಿ, ಆಹಾರ ನೀಡುವ ಕೇಂದ್ರ, ಬ್ರೀಡಿಂಗ್ ಬಾಕ್ಸ್ ಇತ್ಯಾದಿ ಸಲಕರಣೆಗಳನ್ನು ಲೈಫ್ ಸೈನ್ಸ್ ಎಜುಕೇಶನ್ ಟ್ರಸ್ಟ್, ಬೆಂಗಳೂರು ಇವರು ನೀಡಿದ್ದಾರೆ ಎಂದು ಭಂಡಾರಿ ಹೇಳಿದರು.

Related Articles

Leave a Reply

Your email address will not be published. Required fields are marked *

error: Content is protected !!