ಚಿಕ್ಕಬಳ್ಳಾಪುರ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ 22 ವರ್ಷದ ಪ್ರೀತಿ ಸೋಮವಾರ ಮಧ್ಯಾಹ್ನ ತನ್ನ ಕೋಣೆಯ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪ್ರತಿಷ್ಠಿತ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಇನ್ ಪಾರ್ಮಮೇಷನ್ ಸೈನ್ಸ್ ವಿಭಾಗದಲ್ಲಿ ಓದುತ್ತಿದ್ದ ಅವರು ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು.
ಪ್ರೀತಿ ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಸಮೀಪದ ಯಲ್ದೂರು ಗ್ರಾಮದವರು. ಪ್ರಾಥಮಿಕ ವಿಚಾರಣೆಯಿಂದ ಆಕೆ ಸೋಮವಾರ ಕಾಲೇಜಿಗೆ ಹೋಗದೆ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಆಕೆಯ ಸ್ನೇಹಿತರೊಬ್ಬರು ಅವಳನ್ನು ನೋಡಲೆಂದು ಅವಳ ಕೋಣೆಗೆ ಹೋದಾಗ, ಈ ಘಟನೆ ಬೆಳಕಿಗೆ ಬಂದಿದೆ. ಪೋಷಕರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸರು ತನಿಖೆ ಆರಂಭಿಸಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ