Site icon newsroomkannada.com

ದಿಡುಪೆಯಲ್ಲಿ ಉಯ್ಯಾಲೆಗೆ ಸಿಲುಕಿ ಬಾಲಕ ಸಾವು

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವಿಗೀಡಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಶ್ರೀಷಾ(14) ಮೃತ ಬಾಲಕ. ಈ ತ ಎಂಟನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದು, ಭಾನುವಾರವಾದ ಕಾರಣ ಸೀರೆಯಲ್ಲಿ ಮಾಡಿದ ಉಯ್ಯಾಲೆಯಲ್ಲಿ ಆಡುತ್ತಿದ್ದ ಎನ್ನಲಾಗಿದೆ. ಈ ವೇಳೆ ನೆಲಕ್ಕೆ ಬಿದ್ದಿದ್ದ ಎನ್ನಲಾಗಿದೆ. ಆದರೆ ತಕ್ಷಣ

ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version