Site icon newsroomkannada.com

ಕಾಫಿನಾಡಿನಲ್ಲಿ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರದಿಂದ (Dengue Fever) ಮೃತಪಟ್ಟಿದ್ದಾಳೆ. ಮೃತಳನ್ನು ಸಹನಾ ಬಾನು (18) ಎಂದು ಗುರುತಿಸಲಾಗಿದೆ. ಈಕೆ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಸಹನಾ ಬಾನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಸಹನಾ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ.

 

Exit mobile version