ಬಂಟ್ವಾಳ: ಬಿಸಿರೋಡಿನ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಂ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೋಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ.