Site icon newsroomkannada.com

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ

:ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ಅವರು ಪತಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.

 

Exit mobile version