ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ಸುಳ್ಯದಲ್ಲಿ ಸಂಭವಿಸಿದೆ. ಪುತ್ತೂರು ತಿಂಗಳಾಡಿಯ ವಸಂತ ಆತ್ಮಹತ್ಯೆಗೈದ ವ್ಯಕ್ತಿ. ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದ ಇವರು, ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ರೋಗಿಯಾಗಿದ್ದರು ಎಂದು ತಿಳಿದುಬಂದಿದೆ. ಮೃತರು ಪತ್ನಿ ಒರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.