Site icon newsroomkannada.com

ದ.ಕ.ಜಿಲ್ಲೆಯಲ್ಲಿ 40 ಡಿಗ್ರಿ ಸನಿಹಕ್ಕೆ ಬಿಸಿಲಿನ ತಾಪಮಾನ; ಹವಮಾನ ಇಲಾಖೆ ನೀಡಿತ್ತು ಕರಾವಳಿಯಲ್ಲಿ ಮಳೆಯ ಮುನ್ಸೂಚ

ಬಿಸಿಲಿನ ತಾಪಮಾನ ಬುಧವಾರವೂ ದ.ಕ.ಜಿಲ್ಲೆಯಲ್ಲಿ ಮುಂದುವರಿದಿದ್ದು, ಮೇ 6 ಮತ್ತು 7 ರಂದು ಕರಾವಳಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯ ಮುನ್ಸೂಚನೆ ಇದೆ ಎಂದು ಹೇಳಲಾಗಿದೆ.

 

ಬುಧವಾರ ಜಿಲ್ಲೆಯಲ್ಲಿ ಮೋಡ ಸಹಿತ ಬಿಸಿಲಿನ ಝಳ ಕಂಡುಬಂದಿದೆ. ದಿನದ ಸರಾಸರಿ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ಕಂಡುಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗಿದೆ.ಬೆಳ್ತಂಗಡಿ 36.7 ಡಿಗ್ರಿ ಸೆಲ್ಸಿಯಸ್, ಕೊಕ್ಕಡದಲ್ಲಿ ಗರಿಷ್ಠ 37.4 ಡಿಗ್ರಿ ಸೆಲ್ಸಿಯಸ್, ಕಡಬದಲ್ಲಿ 39.3 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ 27.5 ಡಿಗ್ರಿ ಸೆಲ್ಸಿಯಸ್, ಪಣಂಬೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದೆ.

 

 

ಬಿಸಿಲಿನ ತಾಪಮಾನ ತೀವ್ರತೆ ಹಿನ್ನೆಲೆಯಲ್ಲಿ ಬೆಳಗ್ಗೆ 12ರಿಂದ ಸಂಜೆ 3 ಗಂಟೆವರೆಗೆ ಬಿಸಿಲಿಗೆ ಸಂಚರಿಸದಂತೆ ಹಾಗೂ ಹೀಟ್ ಸ್ಟೋಕ್ಗೆ ಒಳಗಾಗದಂತೆ ಎಚ್ಚರ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಡಾ.ರಾಜವೇಲ್ ತಿಳಿಸಿದ್ದಾರೆ.

 

ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು

ಆಗಾಗ ನೀರು ಕುಡಿಯುತ್ತಲೇ ಇರಬೇಕು, ನೀರಿನಂತಿರುವ ಕಲ್ಲಂಗಡಿ, ಕಿತ್ತಳೆ, ಮೂಸಂಬಿ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು ಸೇವಿಸಿ.

 

ನೀರಿನ ಅಂಶವುಳ್ಳ ಆಹಾರಗಳನ್ನು ಸೇವನೆ ಮಾಡಿ, ಮನೆಯಿಂದ ಹೊರಗಡೆ ಕಾಲಿಡುವಾಗ ತಲೆಗೆ ಕ್ಯಾಪ್ ಧರಿಸುವುದು ಒಳ್ಳೆಯದು, ಬೇಸಗೆ ಸಮಯದಲ್ಲಿ ಸಡಿಲ ಉಡುಪುಗಳನ್ನು ಧರಿಸುವುದು ಸೂಕ್ತ

ಬಿಸಿಲಿಗೆ ಬರಿಗಾಲಿನಲ್ಲಿ ನಡೆಯುವುದನ್ನು ನಿಲ್ಲಿಸಿ, ಚಪ್ಪಲಿ ಅಥವಾ ಶೂ ಧರಿಸಿ.

 

ಮಕ್ಕಳ ಆರೋಗ್ಯದ ಮೇಲೆ ಬೇಸಗೆಯ ಹವಾಮಾನ ಪರಿಣಾಮ ಬೀರದಂತೆ ಜಾಗ್ರತೆ ವಹಿಸಬೇಕು. ಮಕ್ಕಳಲ್ಲಿ ನಿರ್ಜಲೀಕರಣ ತಪ್ಪಿಸಲು ಪ್ರತೀ ದಿನ 2ರಿಂದ 3 ಲೀಟರ್ ನೀರನ್ನು ಆಯಾ ಆಯಸ್ಸಿಗೆ ಅನುಗುಣವಾಗಿ ನೀಡಬೇಕು.

ಜ್ವರ, ಶೀತ, ತಲೆನೋವು, ಬೊಕ್ಕೆಗಳು ಕಾಣಿಸಿಕೊಂಡಲ್ಲಿ ನುರಿತ ವೈದ್ಯರನ್ನು ಸಂಪರ್ಕಿಸಿ

Exit mobile version