Site icon newsroomkannada.com

ತಾಯಿ ತೋಟಕ್ಕೆ ಹೋದ ವೇಳೆ ಯುವತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಯುವತಿಯೊಬ್ಬಳು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಮಂಡೆಕೋಲು ಗ್ರಾಮದ ದೇವಪ್ಪ ನಾಯ್ಕರ ಪುತ್ರಿ ಯಶ್ವಿನಿ (23) ಎಂದು ಗುರುತಿಸಲಾಗಿದೆ. ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಕೃತ್ಯ ಎಸಗಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ನೇಣು ಹಾಕಿಕೊಳ್ಳುವ ಸಂದರ್ಭದಲ್ಲಿ ತಾಯಿ ಹುಲ್ಲು ತರಲು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಸದ್ಯ ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version