Site icon newsroomkannada.com

500 ಎಫ್ ವೋಲ್ವೋ ಬಸ್‌ ಹತ್ತಿ ರಾಮೇಶ್ವರಂ ಕೆಫೆಯಿಂದ ಎರಡು ಸ್ಟಾಪ್ ನಂತರ ಇಳಿದ ಶಂಕಿತ

ಮೊಬೈಲ್‌ ಬಳಸದೇ ಕೃತ್ಯ, ಇಲ್ಲಿದೆ ಬಾಂಬ್‌ ಶಂಕಿತನ ಟ್ರಾವೆಲ್‌ ಹಿಸ್ಟ್ರಿ
 ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ 3 ತಿಂಗಳಿಂದ ಸ್ಕೆಚ್‌‌ ಹಾಕಿದ್ದಾರೆ ಎನ್ನಲಾಗಿದೆ. ಕೆಫೆಯಲ್ಲಿ ಯಾವಾಗ ಹೆಚ್ಚು ಜನರು ಇರುತ್ತಾರೆ. ಕೆಫೆಗೆ ಸುತ್ತಮುತ್ತ ಎಲ್ಲೆಲ್ಲಿ ಸಿಸಿ ಕ್ಯಾಮೆರಾ ಇದೆ. ಸಿಸಿ ಕ್ಯಾಮೆರಾ ಇದ್ದರೂ ಕೃತ್ಯದ ಬಳಿಕ ಹೇಗೆ ಸೇಫ್‌ ಆಗಿ ಎಕ್ಸಿಟ್‌ ಆಗಬೇಕು. ಈ ನಡುವೆ ಎಲ್ಲೆಲ್ಲಿ ಪೊಲೀಸ್ ಠಾಣೆಗಳು ಸಿಗುತ್ತವೆ ಎನ್ನುವ ಮಾಹಿತಿಯನ್ನು ಈ ಮೊದಲೇ ಸಂಗ್ರಹಿಸಿದ್ದಾರೆ. ಕೃತ್ಯದಲ್ಲಿ ಒಬ್ಬನಲ್ಲ ಬದಲಿದೆ ಒಂದು ಗ್ಯಾಂಗ್‌ ಕೆಲಸ ಮಾಡಿದೆ ಎಂಬ ಅನುಮಾನ ಮೂಡಿದೆ. ಶಂಕಿತರು ಯಾವುದೇ ಮೊಬೈಲ್‌ ಬಳಸದೇ ಕೃತ್ಯ ಎಸಗಿದ್ದಾರೆ.
ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಇದೊಂದು ಪೂರ್ವ ನಿಯೋಜಿತ ಕೃತ್ಯವಾ ಎಂಬ ಅನುಮಾನ ಮೂಡುತ್ತಿದೆ. ದಿ ರಾಮೇಶ್ವರಂ ಕೆಫೆ ಸ್ಫೋಟವನ್ನು ಬ್ಯುಸಿನೆಸ್ ವಿಚಾರಕ್ಕೆ ಟಾರ್ಗೆಟ್‌ ಮಾಡಿಲ್ಲ. ಬದಲಿಗೆ ಸಾವು-ನೋವುಗಳನ್ನು ಮಾಡಲೇಬೇಕೆಂಬ ಕಾರಣಕ್ಕೆ ಸ್ಫೋಟ ನಡೆಸಲಾಗಿದೆ ಎನ್ನಲಾಗುತ್ತಿದೆ. ಕೆಫೆಯಲ್ಲಿ ಮಧ್ಯಾಹ್ನ ಹೊತ್ತು ಗ್ರಾಹಕರು ಅತಿ ಹೆಚ್ಚಾಗಿ ಬರುತ್ತಾರೆ ಎಂಬ ಮಾಹಿತಿ ಮೊದಲೇ ಸಂಗ್ರಹಿಸಿದ್ದರು. ಸ್ಫೋಟಕ್ಕೂ ಮುನ್ನ ಶಂಕಿತರು ಸಾಕಷ್ಟು ರಿಸರ್ಚ್‌ ಮಾಡಿದ್ದಾರೆ. ಹೀಗಾಗಿ ಯಾವ ಬಸ್‌ನಲ್ಲಿ ಬಂದು ಇಳಿಬೇಕು, ಯಾವ ಬಸ್‌ ಮೂಲಕ ವಾಪಸ್ ಹೋಗಬೇಕೆಂದು ಮೊದಲೇ ಮಾಹಿತಿಯನ್ನು ಸಂಗ್ರಹಿಸಿದ್ದರು ಎನ್ನಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಿಸಿ ಕ್ಯಾಮೆರಾಗಳ ಕೈ ಸಿಗದಂತೆ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಕ್ಯಾಪ್, ಕೈ ರೇಖೆ ಗುರುತು ಸಿಗದಂತೆ ಹ್ಯಾಂಡ್ ಗ್ಲೌಸ್ ಬಳಕೆ ಮಾಡಲಾಗಿದೆ. ಸುಮಾರು 25ರ ಆಸುಪಾಸಿನ ಶಂಕಿತ ಎಂದು ಗುರುತಿಸಲಾಗಿದೆ. ವೋಲ್ವೋ ಬಸ್ ಹತ್ತಿ ರಾಮೇಶ್ವರಂ ಕೆಫೆಯಿಂದ ಎರಡು ಸ್ಟಾಪ್ ನಂತರ ಇಳಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 500 ಎಫ್ ವೋಲ್ವೋ ಬಸ್‌ನ ಕೊನೆಯ ನಿಲ್ದಾಣವಾಗಿದ್ದು, ಅಲ್ಲಿಂದ ಬೇರೆ ಕಡೆಗೆ ಬಸ್‌ ಮೂಲಕವೇ ಹೋಗಲು ಪ್ಲಾನ್‌ ಇತ್ತು ಎನ್ನಲಾಗಿದೆ.
ಇನ್ನೂ ಕೃತ್ಯಕ್ಕೆ ಸ್ವಂತ ವಾಹನ ಬಳಕೆ ಮಾಡಿಲ್ಲ, ಸಾರ್ವಜನಿಕ ಸಾರಿಗೆಯಲ್ಲೇ ಓಡಾಡಿದ್ದಾನೆ. ಮತ್ತೊಂದು ಕಡೆ ತಾನು ಬಂದ ಬಸ್‌ನಲ್ಲಿ ಬಾಂಬ್ ಬಿಟ್ಟು ಹೋಗಬಹುದಿತ್ತು, ಆದರೆ ರಾಮೇಶ್ವರಂ ಕೆಫೆನೇ ಯಾಕೆ ಎಂಬ ಪ್ರಶ್ನೆಯು ಉದ್ಭವಿಸಿದೆ. ಇದೆಲ್ಲವೂ ಪೊಲೀಸರ ತನಿಖೆಯಿಂದಲೇ ಹೊರಬಾರಬೇಕಿದೆ.
Exit mobile version