main logo

ಜಿಲ್ಲಾ ಕ್ರೀಡಾಂಗಣಗಳಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯ ವೀಕ್ಷಣೆ ಅವಕಾಶ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ

ಜಿಲ್ಲಾ ಕ್ರೀಡಾಂಗಣಗಳಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯ ವೀಕ್ಷಣೆ ಅವಕಾಶ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಜಿಲ್ಲಾ ಕ್ರೀಡಾಂಗಣಗಳಲ್ಲಿ ಬಿಗ್‌ ಸ್ಕ್ರೀನ್‌ಲ್ಲಿ ಕ್ರಿಕೆಟ್‌ ವಿಶ್ವಕಪ್‌ ಫೈನಲ್‌ ಪಂದ್ಯ ನೇರ ಪ್ರಸಾರ ಮಾಡಿ ವೀಕ್ಷಣೆಗೆ ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸುತ್ತೋಲೆ ಹೊರಡಿಸಿದೆ. ನವೆಂಬರ್‌ 19 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ವಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡಬೇಕು ಎಂದು ತಿಳಿಸಿದೆ.
ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ, ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದೆ. ಇನ್ನು ಈ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಇಲಾಖೆಗೆ ಸೂಚಿಸಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!