ಮಂಗಳೂರು: ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಮಾಲೀಕರು ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಅಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಮಾಲೀಕರಾದ ಜ್ಯೋತಿ ಅವರು ನಿವೃತ್ತ ಶಿಕ್ಷಕಿಯ ಪೆನ್ಷನ್ ಹಣ ಪಡೆಯಲು ಅಗತ್ಯ ದಾಖಲೆ ನೀಡಲು 5 ಲಕ್ಷ ರೂ.ಗಳಿಗೆ ಬೇಡಿಕೆ ಇರಿಸಿದ್ದರು.
ಶಿಕ್ಷಕಿ ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದು, ಹಣ ಪಡೆಯುವ ವೇಳೆ ಲೋಕಾಯುಕ್ತ ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಶಾಲಾ ಮಾಲೀಕರಾದ ಜ್ಯೋತಿ ಅವರನ್ನು ಲೋಕಾಯುಕ್ತ ವಶಕ್ಕೆ ಪಡೆಯಲಾಗಿದೆ.