ಬಂಟ್ವಾಳ: ಕಂದೂರಿನಲ್ಲಿ ಮನೆಗೆ ನುಗ್ಗಿ ಕಳ್ಳತನ – ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
ಮನೆಯ ಬಾಗಿಲು ಒಡೆದು ಒಳ ನುಗ್ಗಿದ ಕಳ್ಳರು ಹಾಡುಹಗಲೇ ಸುಮಾರು 5 ಲಕ್ಷ ರೂಪಾಯಿಯ ಚಿನ್ನ ಮತ್ತು ಬೆಳ್ಳಿಯನ್ನು ಕದ್ದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಕಂದೂರಿನ ದೇವಮಾತ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ
ಸುಮಾರು 13 ವರ್ಷಗಳಿಂದ ರೋಶನ್ ಡಿಸೋಜ ಅವರು ದೇವಮಾತ ಕಾಂಪ್ಲೆಕ್ಸ್ ನಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದು ಇಂದು ಬೆಳ್ಳಗ್ಗೆ ರೋಶನ್ ಮತ್ತು ಅವರ ಪತ್ನಿ ಕೆಲಸಕ್ಕೆ ಹಾಗೂ ಅವರ ಮಗಳು ಕಾಲೇಜಿಗೆ ಹೋಗಿದ್ದರು.
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಈ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ.
ಯಾರೋ ಗೊತ್ತಿರುವವರೇ ಈ ಕೃತ್ಯ ನಡೆಸಿದ್ದಾರೆ ಎಂದು ಮನೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಸಜೀಪಮೂಡ ಗ್ರಾಮದ ಮಿತ್ತಮಜಲು ಪ್ರದೇಶದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ ಓರ್ವ ಮನೆ ಮುಂದೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು , ಸ್ಥಳೀಯರು ಪ್ರಶ್ನಿಸಿದ ಸಂಧರ್ಭದಲ್ಲಿ ಆತ ಅಲ್ಲಿಂದ ಪರಾರಿಯಾಗಿದ್ದ.