main logo

ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ ಕಾರಣ ಏನು ಗೊತ್ತಾ

ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ ಕಾರಣ ಏನು ಗೊತ್ತಾ

ಬೆಂಗಳೂರು: ಆನ್‌ಲೈನ್‌ನಲ್ಲಿ ಅನುಮತಿ ಪಡೆಯದವರಿಗೆ ಚಾರಣಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಸೂಚನೆ ನೀಡಿದ್ದಾರೆ. ಗಣರಾಜ್ಯೋತ್ಸವದ ದಿನ ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು, ಎಲ್ಲೆಂದರಲ್ಲಿ ಕಸ ಬಿಸಾಡಿರುವ ದೃಶ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಜೊತೆಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಬರುವವರನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ.

ಜೊತೆಗೆ ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಪರಿಸರಕ್ಕೂ ಹಾಣಿಯಾಗುತ್ತಿದೆ. ಹೀಗಾಗಿ ಹೊಸ ಮಾರ್ಗಸೂಚಿ ಜಾರಿಯಾಗುವವರೆಗೂ ಬುಕ್ಕಿಂಗ್ ಇಲ್ಲದ ಚಾರಣಕ್ಕೆ ನಿಷೇಧ ಹೇರುವಂತೆ ಸೂಚನೆ ನೀಡಿದ್ದಾರೆ.

“ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಸೂಚಿಸಿದ್ದಾರೆ.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು ನಿರ್ವಹಿಸುವ ಟ್ರೆಕ್ಕಿಂಗ್ ಮಾರ್ಗಗಳಲ್ಲಿ 150 ಕ್ಕಿಂತ ಹೆಚ್ಚು ಜನರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!