ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಒಬ್ಬ ಪರಾರಿಯಾಗಿದ್ದಾನೆ. ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ಈ ಘಟನೆ ನಡೆದಿದೆ.
ಖಚಿತ ಸುಳಿವಿನ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದೇವರಾಜ್ ಟಿ ವಿ ಮತ್ತು ಸಿಬ್ಬಂದಿ ವಿದ್ಯಾರತ್ನ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗೆ ಕೊಠಡಿಗಳನ್ನು ಒದಗಿಸಿದ ಆರೋಪದ ಮೇಲೆ ಸಲಾಮತ್ ಮತ್ತು ಚಂದ್ರನನ್ನು ಬಂಧಿಸಲಾಗಿದೆ. ದಾಳಿ ವೇಳೆ ಖಾಲಿದ್ ಸ್ಥಳದಿಂದ ಪರಾರಿಯಾಗಿದ್ದಾನೆ.