ಬಾಡಮೇರ್: ಸರಕಾರಿ ಶಾಲೆಯ ಶಿಕ್ಷಕರಿಬ್ಬರು ವಿದ್ಯಾರ್ಥಿಗಳಿಗೆ ಅಶ್ಲೀಲ ಚಿತ್ರದ ವಿಡಿಯೋಗಳನ್ನು ತೋರಿಸುತ್ತಿದ್ದ ಹಿನ್ನೆಲೆ ಅವರನ್ನು ಅಮಾನತುಗೊಳಿಸಿದ ಘಟನೆ ಬಾಡಮೇರ್ ಜಿಲ್ಲೆಯಲ್ಲಿ ನಡೆದಿದೆ.
ಶಿಕ್ಷಕರು ಅಶ್ಲೀಲ ಚಿತ್ರಗಳನ್ನು ಮಕ್ಕಳಿಗೆ ತೋರಿಸುತ್ತಿರುವ ಬಗ್ಗೆ ಕೆಲ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ ನಂತರ ಆರೋಪಿ ಶಿಕ್ಷಕರಾದ ದಿಲೀಪ್ ಪಟೇಲ್ ಮತ್ತು ರಾಮ್ ಖಿಲಾವನ್ ಕೋಲ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಆರೋಪಿ ಶಿಕ್ಷಕರು ಕೆಲ ವಿದ್ಯಾರ್ಥಿನಿಯರಿಗೆ ಕೂಡಾ ಅಶ್ಲೀಲ ಚಿತ್ರಗಳ ವಿಡಿಯೋಗಳನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಘಟನೆಯ ಬಗ್ಗೆ ಪೊಲೀಸ್ ತನಿಖೆಗೆ ಆದೇಶಿಸಲಾಗಿದೆ.