ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನಲ್ಲಿ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಡಿವೈಎಸ್ಪಿ ದಿನಕರ್ ಪಿ. ನೇತೃತ್ವದ ತಂಡ ಕೇರಳದ ಕೊಟ್ಟಾಯಂನಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆಯೆಂದು ಪೊಲೀಸ್ ಮೂಲಗಳು ತಿಳಿಸಿವೆ.
ನೇಜಾರು ತೃಪ್ತಿ ಲೇಔಟ್ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಿಸಿಟಿವಿ ಜಾಡು ಹಿಡಿದು ತನಿಖೆ ನಡೆಸಿದ್ದರು. ಕೃತ್ಯದ ಬಳಿಕ ಆರೋಪಿ
ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್, ಅಲ್ಲಿಂದ ಅಂಬಲಪಾಡಿ, ಕಿನ್ನಿಮುಲ್ಕಿ, ಬಲಾಯಿಪಾದೆ ಹಾಗೂ ಉದ್ಯಾವರ, ಅಲ್ಲಿಂದ ಕಟಪಾಡಿವರೆಗೆ ಸಾಗಿರುವ ಸಿಸಿಟಿವಿ ಪುಟೇಜ್ಗಳ ಜಾಡು ಹಿಡಿದ ಪೊಲೀಸರ ತಂಡವು ಕಾಸರಗೋಡು, ಕೇರಳ ಕಡೆ ತೆರಳಿ ವ್ಯಾಪಕ ಶೋಧ ನಡೆಸಿವೆ. ಆರೋಪಿ ಕೊಲೆ ಬಳಿಕ ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿಯ ಪತ್ತೆ ಹಚ್ಚಿದ ಪೊಲೀಸರ ತಂಡವು ಮಂಗಳೂರು, ತಲಪಾಡಿ, ಕಾಸರಗೋಡು, ಕೇರಳ ರಾಜ್ಯಕ್ಕೆ ಹೋಗಿ ವ್ಯಾಪಕ ಶೋಧ ನಡೆಸಿದ್ದು ಕೊಟ್ಟಾಯಂನಲ್ಲಿ ಇರುವ ಮಾಹಿತಿ ಲಭ್ಯವಾಗಿದ್ದು, ಆತನ ಬಂಧಿಸಲು
ಪೊಲೀಸರ ತಂಡ ಬಲೆ ಬೀಸಿದೆ.