Site icon newsroomkannada.com

ಉಪ್ಪಿನಂಗಡಿ: ಬಜರಂಗದಳ ಮುಖಂಡ ಮತ್ತು ತಂಡದಿಂದ ಗೂಂಡಾಗಿರಿ- ಅಂಗಡಿಗೆ ನುಗ್ಗಿ ಹಲ್ಲೆ

ಮಂಗಳೂರು: ದ.ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ, ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಜರಂಗದಳ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು, ಬಜರಂಗದಳದ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಅಂಗಡಿಗೆ ನುಗ್ಗಿ ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರನ್ನು ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್​ಸಿ ಎಸ್​ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಭರತ್ ಕುಮ್ಡೇಲು ಕಲ್ಲಡ್ಕದ ಬಜರಂಗದಳ ಮುಖಂಡನಾಗಿದ್ದಾನೆ. ಅಲ್ಲದೆ, ಬಂಟ್ವಾಳದಲ್ಲಿ ರೌಡಿ ಶೀಟರ್ ಆಗಿದ್ದು, 2017ರಲ್ಲಿ ಎಸ್​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

Exit mobile version